ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2022-01-10 14:17 GMT

ಉಡುಪಿ, ಜ.10: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, 2021ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು-2021 ಬಹುಮಾನವನ್ನು ನೀಡಲಾಗು ವುದು. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅಥವಾ ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹು ದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ಈ ಎಲ್ಲಾ ವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಫೆಬ್ರವರಿ 10 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ವೆಬ್‌ಸೈಟ್ -www.kannadapustakapradhikara.com- ಅಥವಾ ದೂರವಾಣಿ ಸಂಖ್ಯೆ: 080-22484516/ 22107704ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News