ಮೇಕೆದಾಟು ಜಲಾಶಯ ನಿರ್ಮಾಣ: ಸುಪ್ರೀಂಕೋರ್ಟ್‍ನಲ್ಲಿ ಜ.11ರಂದು ವಿಚಾರಣೆ

Update: 2022-01-10 14:26 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.10: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಹೊಸದಿಲ್ಲಿಯ ರಾಷ್ಟ್ರೀಯ ಹಸಿರು ಮಂಡಳಿಯ ಪ್ರಧಾನ ನ್ಯಾಯಪೀಠ ತೆರವುಗೊಳಿಸಿದ್ದನ್ನು ಪ್ರಶ್ನಿಸಿ, ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಜ.11ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈ ಮೊದಲು ಜ.3ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಜ.27ರಂದು ನಡೆಸುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿತ್ತು.

ಕೃಷ್ಣ ಜಲವಿವಾದ: ಕೃಷ್ಣ ಜಲ ವಿವಾದದ ಐತೀರ್ಪನ್ನು ಗೆಜೆಟ್‍ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಭೋಪಣ್ಣ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News