ಉಡುಪಿ: ಜ.12ರಂದು ಸಾವರ್ಕರ್ ಸಾಹಿತ್ಯ ಸಂಭ್ರಮ

Update: 2022-01-10 14:47 GMT

ಉಡುಪಿ, ಜ.10: ರಾಷ್ಟ್ರೀಯ ವಿಚಾಧಾರೆಗೆ ಪೂರಕವಾದ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದ ಕುರ್ಮಾ ಬಳಗ ಇದೇ ಜ.12ರಂದು ಸ್ವಾಮಿ ವಿವೇಕಾನಂದರ 159ನೇ ಜನ್ಮಜಯಂತಿ ನಿಮಿತ್ತ ವಿನಾಯಕ ದಾಮೋದರ ಸಾವರ್ಕರ್ ಅವರ ಬದುಕು ಬರೆಹಗಳನ್ನು ಯುವ ಜನತೆಗೆ ತೆರೆದಿಡುವ ಪ್ರಯತ್ನ ‘ಜಯೋಸ್ತುತೇ’ ಸಾವರ್ಕರ್ ಸಾಹಿತ್ಯ ಸಂಭ್ರಮವನ್ನು ಆಯೋಜಿಸಿದೆ ಎಂದು ಬಳಗದ ಸಂಚಾಲಕ ಶ್ರೀಕಾಂತ ಶೆಟ್ಟಿ ಕಾರ್ಕಳ ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ.12ರ ಅಪರಾಹ್ನ 3:30ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರ ಸಾವರ್ಕರ್ ಅವರ ಮೊಮ್ಮಗ,ಮೃತ್ಯುಂಜಯ ಪ್ರಕಾಶನದ ಮುಖ್ಯಸ್ಥರಾಗಿರುವ ಸಾತ್ಯಕಿ ಸಾವರ್ಕರ್, ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಖ್ಯಾತ ಸಾಹಿತ್ಯ ವಿಮರ್ಶಕ ಸಂದೀಪ್ ಬಾಲಕೃಷ್ಣನ್ ಮೊದಲಾದವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾವರ್ಕರ್ ಅವರ ಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸ ಲಾಗಿದೆ. ಜೊತೆಗೆ ಸಾವರ್ಕರ್ ಅವರ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀಕಾಂತ್ ಶೆಟ್ಟಿ ತಿಳಿಸಿದರು. ಕೂರ್ಮ ಬಳಗದ ಪ್ರಕಾಶ್ ಮಲ್ಪೆ, ಸೂರಜ್ ಕಿದಿಯೂರು, ಸುಜಿತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News