ಸಾಹಿತಿ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಂತಾಪ
ಮಂಗಳೂರು, ಜ.10: ಹಿರಿಯ ಸಾಹಿತಿ, ಭಾಷಾತಜ್ಞ, ಭಾಷಾ ಹೋರಾಟಗಾರ ಚಂದ್ರದೇಖರ ಪಾಟೀಲ (ಚಂಪಾ)ಅವರ ನಿಧನಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಸಂಚಾಲಕ ಎಂಜಿಆರ್ ಅರಸ್, ದ.ಕ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಉಡುಪಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕಾ.ವೀ.ಕೃಷ್ಣದಾಸ್, ಗೌರವಾಧ್ಯಕ್ಷೆ ತಾರಾ ಆಚಾರ್ಯ, ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಚುಸಾಪ ದ.ಕ. ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ, ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಕವಿ ಡಾ.ಸುರೇಶ್ ನೆಗಳಗುಳಿ, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಕಲ್ಲಚ್ಚು ಪ್ರಕಾಶನದ ಮಹೇಶ್ ಆರ್. ನಾಯಕ್, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು, ಸಂಘಟಕ ಗುರುಪ್ರಸಾದ್ ಕಡಂಬಾರ್, ಟೈಮ್ಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಗಣೇಶ್ ಹೆಬ್ಬಾರ್ ಸಂತಾಪ ಸೂಚಿಸಿದ್ದಾರೆ.