ಸಕಲೇಶಪುರ: ಜೀಪ್- ಆಟೋ ರಿಕ್ಷಾ ನಡುವೆ ಢಿಕ್ಕಿ; ಸ್ಥಳದಲ್ಲೇ ಇಬ್ಬರು ಯುವಕರು ಮೃತ್ಯು
Update: 2022-01-10 21:11 IST
ಸಕಲೇಶಪುರ: ಜೀಪ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಪಶು ಆಸ್ಪತ್ರೆ ಮುಂಭಾಗ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ತಾಲೂಕಿನ ಹಲ್ಲಹಳ್ಳಿ ಗ್ರಾಮದ ಮನೋಜ್‌ಕುಮಾರ್ (24) ಆಲೂರು ತಾಲೂಕು ಬೆಟ್ಟದಳ್ಳಿ ಗ್ರಾಮದ ಶಶಾಂಕ್ (25) ಮೃತಪಟ್ಟ ದುರ್ದೈವಿಗಳು. ಗಂಭೀರ ಗಾಯಗೊಂಡಿರುವ ಮತ್ತೋರ್ವ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.
ಪಟ್ಟಣದ ಪಿಎಸ್‌ಐ ಬಸವರಾಜ್ ಚಿಂಚೊಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.