×
Ad

ಮಂಗಳೂರು: ವೀಕೆಂಡ್ ಕರ್ಫ್ಯೂ ಖಂಡಿಸಿ ಪ್ರತಿಭಟನೆ

Update: 2022-01-10 21:18 IST

ಮಂಗಳೂರು, ಜ.10: ರಾಜ್ಯ ಸರಕಾರವು ವೀಕೆಂಡ್ ಕರ್ಫ್ಯೂ ವಿರೋಧಿಸಿ ಆದಿವಾಸಿ ಹಕ್ಕುಗಳ ಸಮಿತಿ ಹಾಗೂ ದಲಿತ ಹಕ್ಕುಗಳ ಸಮಿತಿಗಳ ಜಂಟಿ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನೀಲ್ ಕುಮಾರ್ ಬಜಾಲ್ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ಮತ್ತೊಮ್ಮೆ ಅನಗತ್ಯವಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹೇರಿ ಲಾಕ್‌ಡೌನ್ ಜಾರಿಗೊಳಿಸಲು ಮುಂದಾಗುತ್ತಿದೆ. ಇದು ದಲಿತ ಮತ್ತು ಆದಿವಾಸಿ ವಿರೋಧಿ ಧೊರಣೆಯಾಗಿದೆ ಎಂದು ಟೀಕಿಸಿದರು.

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ. ಕೃಷ್ಣಪ್ಪಕೊಂಚಾಡಿ, ಪ್ರಗತಿಪರ ಚಿಂತಕ ಪಟ್ಟಾಬಿರಾಮ ಸೊಮಯಾಜಿ, ದಲಿತ ಹಕ್ಕುಗಳ ಸಮಿತಿಯ ಮುಖಂಡ ಯೋಗೀಶ್ ಜಪ್ಪಿನಮೊಗರು ಮಾತನಾಡಿದರು.

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ನಾಯಕರಾದ ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್, ನಿತಿನ್ ಬಂಗೇರ, ಜೆಎಂಎಸ್ ನಾಯಕಿ ಭಾರತಿ ಬೋಳಾರ, ಸಾಮಾಜಿಕ ಚಿಂತಕಿ ಅಸುಂತ ಡಿಸೋಜ, ದಲಿತ ಹಕ್ಕುಗಳ ಸಮಿತಿಯ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಷೀರುಬಾವಿ, ರಘುವೀರ್, ಸುಧಾಕರ್, ಚಂದ್ರಶೇಖರ, ಸುರೇಶ್ ಬಿಜೈ, ಪ್ರವೀಣ್ ಕೊಂಚಾಡಿ, ಮನೋಜ್ ಉರ್ವಸ್ಟೋರ್, ಆದಿವಾಸಿ ಹಕ್ಕುಗಳ ಸಮಿತಿ ನಾಯಕರಾದ ಶಶಿಕಲಾ ನಂತೂರು, ಕಿಶನ್, ವಸಂತಿ, ಅಶ್ವಿನಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News