ಕಲಬುರಗಿ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ನಾಲ್ವರು ವಶಕ್ಕೆ
Update: 2022-01-10 23:39 IST
ಕಲಬುರಗಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಅಬೂಬಕರ್ ಕಾಲೋನಿಯ ಚುನ್ನಾಭಟ್ಟಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮೂವರು 8ನೇ ತರಗತಿಯ ಓದುತ್ತಿದ ನಾಲ್ಕು ಜನ ಅಪ್ರಾಪ್ತ ಬಾಲಕರು ಅಪ್ರಾಪ್ತೆಯನ್ನು ಬೈಕ್ ಮೇಲೆ ಕೂರಿಸಿಕೊಂಡು ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಸಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ತಕ್ಷಣ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವಿವಿ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.