×
Ad

ನಟ ಸೋನು ಸೂದ್ ಸಹೋದರಿ ಮಾಳವಿಕಾ ಕಾಂಗ್ರೆಸ್‌ಗೆ ಸೇರ್ಪಡೆ

Update: 2022-01-10 23:40 IST

ಹೊಸದಿಲ್ಲಿ, ಜ. 10: ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಹಾಗೂ ನವಜ್ಯೋತ್ ಸಿಂಗ್ ಸಿಧು ಅವರ ಉಪಸ್ಥಿತಿಯಲ್ಲಿ ಮಾಳವಿಕಾ ಸೂದ್ ಕಾಂಗ್ರೆಸ್ ಸೇರಿದರು.

ಕೋವಿಡ್ ಬಿಕ್ಕಟ್ಟಿನ ಸಂದರ್ಭ ಸಾಮಾಜಿಕ ಸೇವೆ ಮಾಡುವ ಮೂಲಕ ಜನಮನ ಗೆದ್ದ ಸೋನು ಸೂದ್, ಸಹೋದರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ತರ ಬದಲಾವಣೆ ತರಲಿದೆ ಎಂದು ಕಾಂಗ್ರೆಸ್ನ ಪಂಜಾಬ್ ಘಟಕದ ವರಿಷ್ಠ ನವಜ್ಯೋತ್ ಸಿಂಗ್ ಸಿಧು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಳವಿಕಾ ಸೂದ್, ತಾನು ಜನ ಸೇವೆ ಮಾಡಲು ರಾಜಕೀಯಕ್ಕೆ ಧುಮುಕಿದ್ದೇನೆ ಎಂದರು. ಪಂಜಾಬ್ ನಲ್ಲಿ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 1ರಂದು ಮತ ಎಣಿಕೆ ನಡೆಯಿಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News