ಚಂಪಾ ಸಂಕ್ರಮಣ

Update: 2022-01-11 07:27 GMT

ಜನರಿಂದ, ಜನರಿಗಾಗಿ ಹುಟ್ಟಿದ ಸಾಹಿತ್ಯಕ ಪತ್ರಿಕೆ ಚಂದ್ರಶೇಖರರ ಸಂಕ್ರಮಣ. ಸಾಹಿತ್ಯಾಭಿರುಚಿ ಇರುವ ಎಲ್ಲ ವರ್ಗದ ಬರಹಗಾರರನ್ನು ಒಂದು ಗೂಡಿಸುವ ಕೆಲಸವನ್ನು ಚಂಪಾ ಅವರ ಸಂಕ್ರಮಣ ಮಾಡಿತು. ವಿದ್ಯಾರ್ಥಿಗಳು, ಶಿಕ್ಷಕರಿಂದ ಹಿಡಿದು ವಿಶ್ವವಿದ್ಯಾನಿಯಲದ ಪ್ರೊಫೆಸರ್‌ಗಳು ಇದರಲ್ಲಿ ಬರೆಯ ತೊಡಗಿದರು. ಚರ್ಚೆಗಳಿಗೆ ಮುಕ್ತ ಅವಕಾಶ ನೀಡಿದರು.

ಚಂಪಾ ಸಂಕ್ರಮಣವನ್ನು ಸಾಧ್ಯವಾದಷ್ಟು ಜನರ ಬಳಿಗೆ ಕೊಂಡೊಯ್ಯಲು ಪ್ರಯತ್ನ ಪಟ್ಟರು. ಚಂದಾ ಸಂಗ್ರಹಿಸುವ ಅನಿವಾರ್ಯತೆ ಅವರಿಗಿದ್ದುದರಿಂದ ಅವರು ಯಾವುದೇ ವರ್ಚಸ್ಸು ಇತ್ಯಾದಿಗಳಿಗೆ ಕಟ್ಟು ಬೀಳದೆ, ಪಕ್ಕಾ ಬ್ಯಾರಿಯೊಬ್ಬ ಸಂತೆಯಲ್ಲಿ ವ್ಯಾಪಾರ ನಡೆಸುವಂತೆ ಸಹಜವಾಗಿ ಸಂಕ್ರಮಣವನ್ನು ಸಾಹಿತ್ಯವಲಯದಲ್ಲಿ ನಡೆಸಿದರು. ಸಾಹಿತ್ಯ ಸಮ್ಮೇಳನದಲ್ಲಿ ಅಪರಿಚಿತರೊಂದಿಗೂ ಪರಿಚಿತರಂತೆ ಹಲ್ಲುಕಿರಿಯುತ್ತಾ, ಚಂದಾ ವಸೂಲಿ ಮಾಡುತ್ತಿದ್ದರು. ಒಂದು ರೀತಿ ಸಹಜವಾಗಿ ಅರಳುವ ಕಾಡಿನಂತೆ ಸಂಕ್ರಮಣ ಒಂದಾನೊಂದು ಕಾಲದಲ್ಲಿ ಓದುಗರಲ್ಲಿ ಹಬ್ಬತೊಡಗಿತು. ಅಲ್ಲಿ ಕಳಪೆ ಕಳೆಗಳು ಜಾಸ್ತಿಯಿರಬಹುದು ನಿಜ. ಆದರೆ ಅದರ ಜೊತೆಗೇ ಹೊಸ ಹೊಸ ವೈವಿಧ್ಯಗಳು ಸಂಕ್ರಮಣದ ಮೂಲಕ ಹುಟ್ಟಿಕೊಂಡವು. ತನ್ನಷ್ಟಕ್ಕೆ ಹುಟ್ಟಿ, ಸಾಯುವ ಗಿಡಮರಗಳಿದ್ದುದರಿಂದ ಸಂಕ್ರಮಣವನ್ನು ಕುಂಡದೊಳಗಿಟ್ಟು ಸಾಕುವ ಅನಿವಾರ್ಯತೆ ಚಂಪಾ ಅವರಿಗೆ ಒದಗಲಿಲ್ಲ. ಸಹಜವಾಗಿ ಹರಡಿದ ಕಾಡುಗಳಲ್ಲಿ ಒಂದು ಸತ್ತರೆ ಹತ್ತು ಹುಟ್ಟಿರುತ್ತವೆ. ಅದು ಸಾಹಿತಿಗಳ ಮೇಲರಿಮೆಗಳನ್ನು ಪೋಷಿಸುವ ಉದ್ಯಾನವನವಾಗಲಿಲ್ಲ. ಉದ್ಯಾನವನಗಳಲ್ಲಿ ಇರುವ ಶಿಸ್ತು ಇಲ್ಲಿಲ್ಲ. ಕಾಯಿ ಉದುರಿಸಬಹುದು, ಮರ ಹತ್ತಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಜಗದಗಲ
ಜಗ ದಗಲ