ಐಪಿಎಲ್ ನ ಅತ್ಯಂತ ದುಬಾರಿ ಆಟಗಾರ, ದಕ್ಷಿಣ ಆಫ್ರಿಕಾದ ಆಲ್ ರೌಂಡರ್ ಕ್ರಿಸ್ ಮೊರಿಸ್ ಕ್ರಿಕೆಟಿಗೆ ವಿದಾಯ

Update: 2022-01-11 11:06 GMT
Courtesy: Twitter (@IPL

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಆಲ್ ರೌಂಡರ್ ಕ್ರಿಸ್ ಮೊರಿಸ್ ಎಲ್ಲ ಮಾದರಿ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ದೇಶೀಯ ಕ್ರಿಕೆಟ್ ತಂಡ ಟೈಟಾನ್ಸ್ ನ ಕೋಚಿಂಗ್ ಹುದ್ದೆ ವಹಿಸಿಕೊಳ್ಳುವುದಾಗಿ ಮೊರಿಸ್ ಸ್ಪಷ್ಟಪಡಿಸಿದ್ದಾರೆ.

"ನಾನು ಇಂದು ಎಲ್ಲ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತಿರುವೆ! ನನ್ನ ಕ್ರಿಕೆಟ್ ಪಯಣದೊಂದಿಗೆ ಸಾಗಿಬಂದಿರುವ ಎಲ್ಲರಿಗೂ ಧನ್ಯವಾದಗಳು" ಎಂದು ಮೊರಿಸ್ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಬರೆದಿದ್ದಾರೆ.

ಮೊರಿಸ್ ಅವರು ದಕ್ಷಿಣ ಆಫ್ರಿಕಾದ ಪರ ಎಲ್ಲ 3 ಮಾದರಿಯ ಕ್ರಿಕೆಟ್ ನಲ್ಲಿ 69 ಪಂದ್ಯಗಳನ್ನು ಆಡಿದ್ದಾರೆ. ವಿಶ್ವದಾದ್ಯಂತ ಹಲವು ಟ್ವೆಂಟಿ-20 ಲೀಗ್ ಗಳಲ್ಲಿ ಆಡಿದ್ದಾರೆ. 2021ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದರು. ದಕ್ಷಿಣ ಆಫ್ರಿಕಾದ ಪರ 42 ಏಕದಿನ, 4 ಟೆಸ್ಟ್ ಹಾಗೂ 23 ಟಿ-20 ಪಂದ್ಯಗಳನ್ನು ಆಡಿದ್ದಾರೆ. 2019ರ ಜುಲೈನಲ್ಲಿ ಇಂಗ್ಲೆಂಡ್ ನಲ್ಲಿ ನಡೆದಿದ್ದ 50 ಓವರ್ ಗಳ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಕೊನೆಯ ಬಾರಿ ಪ್ರತಿನಿಧಿಸಿದ್ದರು.

ಐಪಿಎಲ್ 2021ಗಾಗಿ ನಡೆದ ಆಟಗಾರರ ಹರಾಜಿನಲ್ಲಿ 16.25 ಕೋ.ರೂ.ಗೆ ರಾಜಸ್ಥಾನ ರಾಯಲ್ಸ್ ಗೆ ಹರಾಜಾಗುವ ಮೂಲಕ ಐಪಿಎಲ್ ನ ದುಬಾರಿ ಆಟಗಾರನಾಗಿ ಹೊರ ಹೊಮ್ಮಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News