ಅಂಗವಿಕಲರ ಹಕ್ಕುಗಳ ಕಾಯಿದೆ ಅಡಿ ರಾಜ್ಯ ನಿಯಮ ಪ್ರಕಟ: ಹೈಕೋರ್ಟ್ ಗೆ ಮಾಹಿತಿ ನೀಡಿದ ಸರಕಾರ

Update: 2022-01-11 15:40 GMT

ಬೆಂಗಳೂರು, ಜ.11: ಅಂಗವಿಕಲರ ಹಕ್ಕುಗಳ ಕಾಯ್ದೆ-2016ರ ಅಡಿ ರಾಜ್ಯ ನಿಯಮಗಳನ್ನು 2019ರ ಸೆ.5ರಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ತಿಳಿಸಿದೆ. 

ನಿಯಮಗಳ ಜಾರಿಗೆ ಸಂಬಂಧಿಸಿದಂತೆ ಚಂದ್ರಶೇಖರ್ ಪುಟ್ಟಪ್ಪ ಇನ್ನಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿ ನಡೆಯಿತು.
 
ಅಂಗವಿಕಲರ ಹಕ್ಕುಗಳ ಕಾಯಿದೆ ಅಡಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆಯೇ ಎಂದು ಸರಕಾರವನ್ನು ನ್ಯಾಯಪೀಠವು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸರಕಾರಿ ಪರ ವಕೀಲರು, ಇನ್ನೂ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿಲ್ಲ ಎಂದು ಪೀಠಕ್ಕೆ ವಿವರಿಸಿದರು. 

ನ್ಯಾಯಪೀಠವು, ಅಂಗವಿಕಲರ ಹಕ್ಕುಗಳ ಕಾಯಿದೆ ಅಡಿ ರಾಜ್ಯ ನಿಯಮಗಳನ್ನು ಈಗಾಗಲೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಜತೆಗೆ ವಿಶೇಷ ನ್ಯಾಯಾಲಯಗಳನ್ನೂ ಸ್ಥಾಪಿಸಬೇಕಿದೆ. ಮುಂದಿನ ವಿಚಾರಣೆಯಲ್ಲಿ ಯಾವಾಗ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸರಕಾರಿ ಪರ ವಕೀಲರು ತಿಳಿಸಬೇಕು ಎಂದು ಸೂಚನೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News