ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-01-12 14:55 GMT

ಬೆಂಗಳೂರು, ಜ.12: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಪಿ.ಮೋಹನ್ ರಾಜ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಕಲ್ಯಾಣ)ರಾಗಿ ಬಿ.ಶರತ್ ಹಾಗೂ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಎಂ.ಆರ್.ರವಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ.ಆರ್.ಸೆಲ್ವಮಣಿಯವರನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News