×
Ad

ಕೆಆರ್ ಎಸ್ ಸುತ್ತ ಗಣಿಗಾರಿಕೆ: ಗಣಿ ಮಾಲಕರ ಮನವಿ ಪರಿಗಣಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2022-01-12 23:16 IST

ಬೆಂಗಳೂರು, ಜ.12: ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ(ಕೆಆರ್‍ಎಸ್) ಸುತ್ತಮುತ್ತಲಿನ 17 ಕಲ್ಲು ಗಣಿಗಾರಿಕೆ ಘಟಕಗಳ ಪರವಾನಗಿಯನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ಗಣಿ ಮಾಲಕರ ಮನವಿಯನ್ನು 3 ವಾರದಲ್ಲಿ ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.   

ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ 17 ಗಣಿ ಘಟಕಗಳ ಮಾಲಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ನಿರ್ದೇಶನ ನೀಡಿದೆ. 

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆಗೆ ನೀಡಿದ್ದ ಪರವಾನಗಿಗಳನ್ನು ರದ್ದುಪಡಿಸಿ ಮಂಡ್ಯ ಜಿಲ್ಲಾಧಿಕಾರಿ ಆದೇಶಿಸಿದ್ದರು. ಜತೆಗೆ ನೋಟಿಸ್ ಅನ್ನು ಕೂಡ ಜಾರಿಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಘಟಕಗಳ ಮಾಲಕರು ಹೈಕೋರ್ಟ್ ಮೆಟ್ಟಿಲೇರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News