ದಾವಣಗೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

Update: 2022-01-12 18:13 GMT

ದಾವಣಗೆರೆ: ಕೇಂದ್ರ ಸರಕಾರದ 2021-22ರ ಆಯವ್ಯಯದಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರು ಬುಧವಾರ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರಕಾರಕ್ಕೆ  ಮನವಿ ಸಲ್ಲಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, ಬಿಸಿಯೂಟ ತಯಾರಕರು ಕಳೆದ 19 ವರ್ಷಗಳಿಂದ ಕನಿಷ್ಠ ವೇತನ ಇಲ್ಲದೆ ಗೌರವ ಸಂಭಾವನೆ ಪಡೆದು ದುಡಿಯುತ್ತಿರುವುದರಿಂದ ಜೀವನ ನಿರ್ವಹಿಸಲು ಕಷ್ಟವಾಗುತ್ತಿದೆ, ಆದ್ದರಿಂದ 2021-22ರ ಆಯವ್ಯಯದಲ್ಲಿ ಕನಿಷ್ಠ ವೇತನ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಬಿಸಿಯೂಟ ತಯಾರಕರಿಗೆ ಸರ್ಕಾರ ಕನಿಷ್ಟ 21ಸಾವಿರ ವೇತನ ಜಾರಿಮಾಡಬೇಕು. ಅವರ ಕೆಲಸ ಖಾಯಂಗೊಳಿಸಿ ಸೌಲಭ್ಯ ನೀಡಬೇಕು. ಬಿಸಿಯೂಟ ತಯಾರಿಕೆಯನ್ನು ಖಾಸಗಿ ಸಂಸ್ಥೆಗೆ ನೀಡುವ ನಿರ್ಧಾರ ಕೈಬಿಡಬೇಕು. ಬಿಸಿಯೂಟ ತಯಾರಕರನ್ನು ಕಾರ್ಮಿಕರು ಎಂದು ಘೋಷಿಸಿ, 60 ವರ್ಷ ಮೀರಿ ನಿವೃತ್ತಿ ಆದವರಿಗೆ 2 ಲಕ್ಷ ಇಡಿಗಂಟು ನೀಡಬೇಕು. ಜತೆಗೆ ಮಾಸಿಕ 3ಸಾವಿರ ಪಿಂಚಣಿ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಬಿಸಿಯೂಟ ತಯಾರಕರ ತಾಲೂಕು ಸಮಿತಿ ಪದಾಧಿಕಾರಿಗಳಾದ ಮಳಲಕೆರೆ ಜಯಮ್ಮ, ಜ್ಯೋತಿಲಕ್ಷ್ಮಿ, ಪದ್ಮಾ, ಸರೋಜಾ, ಸಿ.ರಮೇಶ್, ನರೇಗಾ ರಂಗನಾಥ್, ಪರಶುರಾಮ್, ವನಜಾಕ್ಷಮ್ಮ, ಶೋಭಾ, ಪಾರ್ವತಿಬಾಯಿ, ಮಂಜುಳ, ಸುವರ್ಣಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News