ಬಿಬಿಎಂಪಿ ಪೌರಕಾರ್ಮಿಕರಿಂದ ಕನಿಷ್ಠ ವೇತನ ಪರಿಷ್ಕರಣೆ ಕೋರಿ ಅರ್ಜಿ: ಮನವಿ ಪರಿಗಣಿಸಲು ಸರಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ಜ.12: ಬಿಬಿಎಂಪಿ ಪೌರಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ಸರಕಾರಕ್ಕೆ ಪೌರಕಾರ್ಮಿಕರ ಸಂಘದ ಮನವಿ ಪರಿಗಣಿಸುವಂತೆ ಆದೇಶ ನೀಡಿದೆ.
ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ, ರಾಜ್ಯ ಸರಕಾರ, ಕನಿಷ್ಠ ವೇತನ ಸಲಹಾ ಮಂಡಳಿಗೆ ಬಿಬಿಎಂಪಿ ಪೌರಕಾರ್ಮಿಕ ಸಂಘದ ಮನವಿಯನ್ನು ಪರಿಗಣಿಸುವಂತೆ ಆದೇಶ ನೀಡಿದೆ.
ಕನಿಷ್ಠ ವೇತನ ಕಾಯಿದೆ, 1948ರ ಪ್ರಕಾರ ಕನಿಷ್ಠ ವೇತನವನ್ನು 5 ವರ್ಷಗಳಿಗೊಮ್ಮೆ ಪರಿಶೀಲಿಸಬೇಕು ಮತ್ತು ಪರಿಷ್ಕರಿಸಬೇಕು. ಆದಾಗ್ಯೂ, ಇದನ್ನು ಮಾಡಲಾಗಿಲ್ಲ ಮತ್ತು ಬದಲಿಗೆ 2016ರಲ್ಲಿ ಪರಿಷ್ಕರಿಸಿದ ವೇತನವನ್ನು ಇನ್ನೂ ಪೌರಕಾರ್ಮಿಕರಿಗೆ ನೀಡಲಾಗುತ್ತಿದೆ. ಕನಿಷ್ಠ ವೇತನವನ್ನು ಪರಿಷ್ಕರಿಸಲು ವಿಫಲವಾದ ಪರಿಣಾಮ ಸದ್ಯದ ಪರಿಸ್ಥಿತಿಯಲ್ಲಿ ಕಾರ್ಮಿಕರು ಶೋಷಣೆಗೊಳಪಟ್ಟ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೈಕೋರ್ಟ್‍ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಪೌರಕಾರ್ಮಿಕರು ಆರೋಗ್ಯ, ಸುರಕ್ಷತೆ ಮತ್ತು ಪ್ರಾಣವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ, ಪೌರಕಾರ್ಮಿಕರ ವೇತನವನ್ನು 35 ಸಾವಿರಕ್ಕೆ ಹೆಚ್ಚಿಸಲು ನಿರ್ದೇಶಿಸಲು ನಿರ್ದೇಶಿಸಬೇಕೆಂದು ಪೀಠಕ್ಕೆ ಸಂಘವು ಮನವಿ ಮಾಡಿತ್ತು.