ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ. ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ ಎಂದು ಹೇಳಿದರು.
ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.
ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ.
— Basavaraj S Bommai (@BSBommai) January 12, 2022
ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
1/3