ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಟಿ.ಎ. ನಾರಾಯಣಗೌಡ ಆಯ್ಕೆ
Update: 2022-01-13 18:27 IST
ಬೆಂಗಳೂರು, ಜ.13: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2022ನೇ ಸಾಲಿನ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಕನ್ನಡ ನಾಡು-ನುಡಿ ರಕ್ಷಣೆಗಾಗಿ ಅನೇಕ ಹೋರಾಟಗಳನ್ನು ಮಾಡಿದ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.