×
Ad

ಯುವ ಸೌರಭ: ಯುವ ಕಲಾವಿದರ ಪ್ರತಿಭೆಗೆ ಉತ್ತಮ ವೇದಿಕೆ

Update: 2022-01-13 22:10 IST

ಉಡುಪಿ, ಜ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಯುವಸೌರಭ ಯುವ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ಇತ್ತೀಚೆಗೆ ಅಲೆವೂರು ಪ್ರಗತಿನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಆವರಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ವಿದ್ವಾಂಸ ನಾಡೋಜ ಪ್ರೊ.ಕೆ.ಪಿ.ರಾವ್ ಉದ್ಘಾಟಿಸಿದರು. ಸಾಹಿತಿ ಡಾ.ಮಾಧವಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾಹಿತಿಗಳಾದ ಪ್ರೊ.ಮೇಟಿ ಮುದಿಯಪ್ಪ, ತಿಲಕನಾಥ ಮಂಜೇಶ್ವರ್ ಉಪಸ್ಥಿತ ರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು.

ಜಿಲ್ಲೆಯ ಯುವ ಕಲಾವಿದರು ಭಾವಗೀತೆ ಗಾಯನ, ಶಾಸ್ತ್ರೀಯ ವಾದ್ಯ ಸಂಗೀತ, ಸುಗಮ ಸಂಗೀತ, ಕಂಸಾಳೆ ನೃತ್ಯ, ದಾಸರ ಪದಗಳು, ನಾಟಕ, ವೀರಗಾಸೆ ನೃತ್ಯ, ಸಮೂಹ ನೃತ್ಯ, ಕಂಗೀಲು ನೃತ್ಯ, ಚಂಡೆ ವಾದನ ಕಾರ್ಯಕ್ರಮಗಳಲ್ಲಿ ತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News