×
Ad

ಬೆಂಗಳೂರು: ಅಪಘಾತದಲ್ಲಿ ರಿಯಾಲಿಟಿ ಶೋ ಸ್ಪರ್ಧಾರ್ಥಿ ಬಾಲಕಿ ಮೃತ್ಯು

Update: 2022-01-13 22:15 IST

ಬೆಂಗಳೂರು, ಜ.13:‌ಟಿಪ್ಪರ್​ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ವಾಹಿನಿವೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ನನ್ನಮ್ಮ ಸೂಪರ್​ ಸ್ಟಾರ್​ ಸ್ಪರ್ಧಿ' ಸಮನ್ವಿ (6) ಸಾವನ್ನಪ್ಪಿದ್ದಾರೆ.

ಗುರುವಾರ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನೂ, ಘಟನೆಯಲ್ಲಿ ಬಾಲಕಿ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್​ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ವಶಕ್ಕೆ ಪಡೆದು, ಮೊಕದ್ದಮೆ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News