ಜಮ್ಮುಕಾಶ್ಮೀರ: ನಿಗೂಢ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಮೃತ್ಯು
Update: 2022-01-13 23:51 IST
ಜಮ್ಮು, ಜ. 13: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ನಿಗೂಢ ಗುಂಡಿನ ದಾಳಿ ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಸೇನಾ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯ ರಾಜೌರಿಯ ಹಂಜನ್ವಾಲಿ ಪ್ರದೇಶದಲ್ಲಿ ಈ ಗುಂಡಿನ ದಾಳಿಯ ಘಟನೆ ನಡೆದಿದೆ. ಇದರಿಂದ ಇಬ್ಬರು ಯೋಧರು ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಯೋಧರೇ ಪರಸ್ಪರ ಗುಂಡು ಹಾರಿಸಿದ್ದಾರೆ. ಇದರಿಂದ ಸಾವು ಸಂಭವಿಸಿದೆ ಎಂದು ದೃಢೀಕೃತವಲ್ಲದ ವರದಿಯೊಂದು ಹೇಳಿದೆ.