ವಿಜಯಪುರ: ಎಂ.ಬಿ.ಪಾಟೀಲ್‍ಗೆ ಭದ್ರತೆ ನೀಡಲು ಎಸ್ ಪಿಗೆ ಮನವಿ

Update: 2022-01-13 18:51 GMT

ವಿಜಯಪುರ, ಜ.13: ಮಾಜಿ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಗುರುವಾರ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಸಾಲಕ್ಕಿ ಸೇರಿದಂತೆ ಪ್ರಮುಖರು ಮನವಿ ಸಲ್ಲಿಸಿ, ಎಂ.ಬಿ.ಪಾಟೀಲ್ ಅವರ ಮನೆ ಹಾಗೂ  ಕುಟುಂಬದ ಸದಸ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಕೋರಿದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡರು, ರಾಜ್ಯದ ನೀರಾವರಿ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ಹಾಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ನಡುವೆ ಆರೋಪ, ಪ್ರತ್ಯಾರೋಪ, ವಾಗ್ವಾದ ತಾರಕಕ್ಕೇರಿರುವ ನಡುವೆ ಕೆಲವೊಂದು ಸಂಘಟನೆಗಳು ಪಾಟೀಲರ ಮನೆ ಎದುರು ಪ್ರತಿಭಟನೆ ನಡೆಸುತ್ತಿರುವುದರಿಂದ ರಕ್ಷಣೆಯ ಅಗತ್ಯವಿದೆ ಎಂದರು.

ಎಂ.ಬಿ.ಪಾಟೀಲ್ ಅವರ ಜನಪ್ರಿಯತೆ ಸಹಿಸದವರು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕುಮ್ಮಕ್ಕಿನಿಂದ ಪಾಟೀಲರ ಮನೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಸುಳ್ಳು ಆರೋಪ ಮಾಡುತ್ತಾ, ಬಹಿರಂಗವಾಗಿ ಅಸಂವಿಧಾನಿಕ ಶಬ್ದಗಳನ್ನು ಬಳಸಿ ತೇಜೋವಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News