ವಿಕ್ಟೊರಿಯಾ ಆಸ್ಪತ್ರೆಗೆ ಸಚಿವ ಡಾ.ಸುಧಾಕರ್ ಭೇಟಿ: ಕೋವಿಡ್ ಚಿಕಿತ್ಸೆ ಸಿದ್ಧತೆ ಪರಿಶೀಲನೆ

Update: 2022-01-14 10:09 GMT
Photo credit Twitter@mla_sudhakar

ಬೆಂಗಳೂರು, ಜ.14: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಶುಕ್ರವಾರ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್–19 ಸೋಂಕಿತರ ಚಿಕಿತ್ಸೆಗೆ ಮಾಡಲಾಗಿರುವ ಸಿದ್ಧತೆ ಹಾಗೂ ಕೋವಿಡ್ ಲಸಿಕೆಯ ಮುನ್ನೆಚ್ಚರಿಕಾ ಡೋಸ್ ವಿತರಣೆಯ ಪ್ರಗತಿ ಪರಿಶೀಲನೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ವಿಕ್ಟೊರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೊರೋನ ಲಸಿಕೆಯ ಮುಂಜಾಗ್ರತಾ ಡೋಸ್ ವಿತರಣೆಯ ಪ್ರಗತಿ ಹಾಗೂ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಲಾಯಿತು ಎಂದು ಹೇಳಿದ್ದಾರೆ.

ಇದೇವೇಳೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪಿಎಂಎಸ್ಎಸ್‌ವೈ ಆಸ್ಪತ್ರೆಗೆ ಭೇಟಿ ನೀಡಿ ಮುಂಜಾಗ್ರತಾ ಡೋಸ್ ಪಡೆದುಕೊಂಡರು ಎಂದೂ ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆಯು ಈ ಹಿಂದಿನ ಎರಡೂ ಅಲೆಗಳಿಗಿಂತ ವೇಗವಾಗಿದೆ ಎಂದಿರುವ ಸಚಿವರು, ಮೊದಲ ಅಲೆ, ಎರಡನೇ ಅಲೆ ಹಾಗೂ ಮೂರನೇ ಅಲೆಯ ಸಂದರ್ಭದಲ್ಲಿ ಪ್ರಕರಣಗಳು ಹೆಚ್ಚಾದ ಅಂಕಿಅಂಶಗಳ ಪಟ್ಟಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News