ಪ್ರೊ. ಕೈಲಾರ್ ಶಂಕರ್ ಭಟ್

Update: 2022-01-14 12:51 GMT

ಮಂಗಳೂರು, ಜ.14: ಸಂತ ಅಲೋಶಿಯಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಕೈಲಾರ್ ಶಂಕರ್ ಭಟ್ (89) ಗುರುವಾರ ನಗರದ ಈಡನ್ ಕ್ಲಬ್ ಬಳಿಯ ಶ್ರಾದ್ಧಾನಂದ ಆಶ್ರಮ ರಸ್ತೆಯಲ್ಲಿರುವ ಱಕೈಲಾರ್’ ನಿವಾಸದಲ್ಲಿ ನಿಧನರಾದರು.

ಮೃತರು ಪತ್ನಿ ಮತ್ತು ಒಬ್ಬ ಪುತ್ರ ಹಾಗೂ ಮೂವರು ಹೆಣ್ಣುಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಗೆ ದಾನ ಮಾಡಿದ್ದಾರೆ.

ಪುತ್ತೂರು ತಾಲೂಕಿನ ಕಬಕ ಗ್ರಾಮದ ಬೈಪದವು ಎಂಬಲ್ಲಿ 1932ರ ನ.11ರಂದು ಜನಿಸಿದ್ದ ಕೈಲಾರ್ ಶಂಕರ್ ಭಟ್ ಪ್ರಾಥಮಿಕ ಶಿಕ್ಷಣವನ್ನು ಕೆದಿಲ ಗ್ರಾಮದ ಗಡಿಯಾರ ಶಾಲೆ ಮತ್ತು ಪುತ್ತೂರಿನ ಬೋರ್ಡ್ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದರು. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎ ಪದವಿ ಹಾಗೂ ಬೆಳಗಾವಿಯ ರಾಣಿ ಪಾರ್ವತಿ ದೇವಿ ಕಾಲೇಜಿನಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದರು.

1958ರಲ್ಲಿ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ಇತಿಹಾಸ ವಿಭಾಗಗಳಲ್ಲಿ ಬೋಧನೆಗೈದು 1991ರಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದರು. 15 ವಷರ್ಗಳ ಕಾಲ ಎನ್‌ಸಿಸಿ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ