ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 497 ಮಂದಿಗೆ ಕೊರೋನ ಪಾಸಿಟಿವ್

Update: 2022-01-14 15:15 GMT
ಸಾಂದರ್ಭಿಕ ಚಿತ್ರ

ಉಡುಪಿ, ಜ.14: ಜಿಲ್ಲೆಯಲ್ಲಿ ಶುಕ್ರವಾರ 497 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರಿಂದ ದಿನದಲ್ಲಿ ಸೋಂಕಿಗೆ ಈಗಲೂ ಸಕ್ರಿಯರಾಗಿರುವವರ ಸಂಖ್ಯೆಯೂ ಎರಡು ಸಾವಿರದ ಗಡಿ ದಾಟಿದ್ದು 2729 ಆಗಿದೆ. ದಿನದಲ್ಲಿ 76 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 497 ಮಂದಿಯಲ್ಲಿ 264 ಮಂದಿ ಪುರುಷರು ಹಾಗೂ 133 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 354 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ, ಕುಂದಾಪುರ ತಾಲೂಕಿನ 68 ಮಂದಿ ಹಾಗೂ ಕಾರ್ಕಳ ತಾಲೂಕಿನ 70 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಹೊರಜಿಲ್ಲೆಗಳಿಂದ ಬಂದ ಐವರಲ್ಲಿ ಸಹ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಸದ್ಯದ ಪಾಸಿಟಿವಿಟಿ ಪ್ರಮಾಣ ಶೇ.7.4ಕ್ಕೇರಿದೆ.

ಇಂದು ಪಾಸಿಟಿವ್ ಬಂದ 497 ಮಂದಿಯಲ್ಲಿ 13 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, 12 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, ಹತ್ತು ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 462 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ 76 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 542ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 3470 ಮಂದಿ, ಕುಂದಾಪುರದಲ್ಲಿ 1571 ಹಾಗೂ ಕಾರ್ಕಳ ತಾಲೂಕಿನ 1611 ಮಂದಿ ಸೇರಿದಂತೆ ಒಟ್ಟು 6652 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 2729ಕ್ಕೇರಿದೆ. ಇಂದು ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

1022 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 1022 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 365 ಮಂದಿ ಲಸಿಕೆ ಪಡೆದರೆ, 561 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 96 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

3430 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 3430 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 1371 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 2294 ಮಂದಿ ಮೊದಲ ಡೋಸ್ ಹಾಗೂ 1136 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News