ದಾವಣಗೆರೆ: ರಾತ್ರಿ ವಸತಿ ‌ಶಾಲೆಯಲ್ಲಿ‌ ಊಟ ಸೇವಿಸಿದ 50ಕ್ಕೂ‌ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Update: 2022-01-15 05:29 GMT

ದಾವಣಗೆರೆ: ವಸತಿ ಶಾಲೆಯೊಂದರಲ್ಲಿ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿನಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ‌ ವಸತಿ ‌ಶಾಲೆಯಲ್ಲಿ‌ ಘಟನೆ ಸಂಭವಿಸಿದೆ. 

ಫುಡ್ ಪಾಯಿಝನ್ ನಿಂದಾಗಿ ಶುಕ್ರವಾರ ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು ಸುಸ್ತಾಗಿದ್ದರು. ತಕ್ಷಣ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News