ಉತ್ತರಪ್ರದೇಶ ಚುನಾವಣೆ: 53 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಎಸ್‌ಪಿ

Update: 2022-01-15 07:40 GMT

ಲಕ್ನೋ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಂಬರುವ ಚುನಾವಣೆಗೆ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

"ನಾವು ಮೊದಲ ಪಟ್ಟಿಯಲ್ಲಿ 53 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಉಳಿದ 5 ಸ್ಥಾನಗಳನ್ನು ನಾವು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ" ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 11 ಜಿಲ್ಲೆಗಳಲ್ಲಿ ಹರಡಿರುವ ಒಟ್ಟು 58 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 10 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ಮಾಯಾವತಿ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News