×
Ad

ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಕೋವಿಡ್ ಪಾಸಿಟಿವ್

Update: 2022-01-15 20:50 IST

ಬೆಂಗಳೂರು, ಜ. 15: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಹಾಗೂ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಪ್ರಿಯಾಂಕ್  ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಶನಿವಾರ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, ಮೊದಲು ಮತ್ತು ಎರಡನೇ ಅಲೆಯಲ್ಲಿ ನಾನು ಪಾರಾಗಿದ್ದೇ. ಒಮ್ಮೆ ಸುಳ್ಳು ಪಾಸಿಟಿವ್ ವರದಿ ಬಂದಿತ್ತು.

ಹಲವು ಬಾರಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ಬಂದಿತ್ತು. ಇದೀಗ ಪರೀಕ್ಷೆ ಮಾಡಿಸಿದ್ದು ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ನಮ್ಮ ಸಿಬ್ಬಂದಿ ಪರೀಕ್ಷೆಗೆ ಒಳಗಾಗಿದ್ದು ಅವರಿಗೆ ನೆಗೆಟಿವ್ ಬಂದಿದೆ.

ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕೋರಿರುವ ಪ್ರಿಯಾಂಕ್ ಖರ್ಗೆ, ಮನೆಯಲ್ಲಿ ಐಸೋಲೇಷನ್ ನಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News