ಉಡುಪಿ: ಜಿಲ್ಲೆಯ 607 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2022-01-15 15:28 GMT
ಸಾಂದರ್ಭಿಕ ಚಿತ್ರ (PTI)

ಉಡುಪಿ, ಜ.15: ಜಿಲ್ಲೆಯಲ್ಲಿ ಶುಕ್ರವಾರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 607ಕ್ಕೆ ನೆಗೆದಿದೆ. ಈ ಮೂಲಕ ಸೋಂಕಿಗೆ ಈಗ ಸಕ್ರಿಯರಾಗಿರುವವರ ಸಂಖ್ಯೆ 2879ಕ್ಕೇರಿದೆ.ಅಲ್ಲದೇ ದಿನದಲ್ಲಿ 63 ಮಂದಿ ಸೋಂಕಿನಿಂದ ಗುಣಮುಖ ರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 607 ಮಂದಿಯಲ್ಲಿ 318 ಮಂದಿ ಪುರುಷರು ಹಾಗೂ 289 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 398 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ, ಕುಂದಾಪುರ ತಾಲೂಕಿನ 117ಮಂದಿ ಹಾಗೂ ಕಾರ್ಕಳ ತಾಲೂಕಿನ 90 ಮಂದಿ ಇವರಲ್ಲಿ ಸೇರಿದ್ದಾರೆ. ಹೊರಜಿಲ್ಲೆಗಳಿಂದ ಬಂದ ಇಬ್ಬರಲ್ಲಿ ಸಹ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಸದ್ಯದ ಪಾಸಿಟಿವಿಟಿ ಪ್ರಮಾಣ ಶೇ.10.02ಕ್ಕೇರಿದೆ.

ಇಂದು ಪಾಸಿಟಿವ್ ಬಂದ 607 ಮಂದಿಯಲ್ಲಿ 28 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, ಏಳು ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, ಎಂಟು ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 564 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ 63 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 605ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 3105 ಮಂದಿ, ಕುಂದಾಪುರದಲ್ಲಿ 1487 ಹಾಗೂ ಕಾರ್ಕಳ ತಾಲೂಕಿನ 1446 ಮಂದಿ ಸೇರಿದಂತೆ ಒಟ್ಟು 6038 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 3336ಕ್ಕೇರಿದೆ. ಇಂದು ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

612 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 612 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 335 ಮಂದಿ ಲಸಿಕೆ ಪಡೆದರೆ, 203 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 74 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಟ್ಟು 612 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 335 ಮಂದಿ ಲಸಿಕೆ ಪಡೆದರೆ, 203 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 74 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

1754 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 1754 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 183 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 547 ಮಂದಿ ಮೊದಲ ಡೋಸ್ ಹಾಗೂ 1207 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News