ಕನ್ನಡ ಕಡ್ಡಾಯ: ಜ.17ರಂದು ಹೈಕೋರ್ಟ್‍ನಲ್ಲಿ ವಿಚಾರಣೆ

Update: 2022-01-15 15:52 GMT

ಬೆಂಗಳೂರು, ಜ.15: ಪದವಿ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸಲಾಗಿರುವ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಜ.17ರಂದು ಹೈಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿದೆ. 

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪದವಿಗೆ ಕನ್ನಡ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಸಂಸ್ಕøತ ಭಾರತಿ ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವ ಟ್ರಸ್ಟ್, ವ್ಯೋಮ ಲಿಂಗ್ವಿಸ್ಟಿಕ್ ಲ್ಯಾಬ್ಸ್ ಫೌಂಡೇಶನ್ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ. 

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಕರ್ನಾಟಕ ಸರಕಾರ, ಉನ್ನತ ಶಿಕ್ಷಣ ಇಲಾಖೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನ್ನು ಪ್ರತಿವಾದಿಗಳನ್ನಾಗಿಸಿ ಈ ಅರ್ಜಿ ಸಲ್ಲಿಸಲಾಗಿದೆ. 

ಇದೀಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನನ್ನೂ ಪ್ರತಿವಾದಿಯನ್ನಾಗಿಸುವಂತೆ ಕೋರಿ ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಲು ನಿರ್ಧರಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News