×
Ad

ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದ ಸ್ತಬ್ಧಚಿತ್ರ ಆಯ್ಕೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

Update: 2022-01-15 22:55 IST

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದಿಂದ ಆಯ್ಕೆಯಾಗಿರುವ ಸ್ತಬ್ಧಚಿತ್ರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. 

"ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ'' ಎಂದು ತಿಳಿಸಿದ್ದಾರೆ.

''ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. 


.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News