ಮಾಸ್ಕ್ ವಿಚಾರ; ಸಂಚಾರ ಪೊಲೀಸರ ಜೊತೆ ದಂಪತಿ ವಾಗ್ವಾದ

Update: 2022-01-16 14:22 GMT

ಮಂಗಳೂರು, ಜ.16: ಮಾಸ್ಕ್ ವಿಚಾರದಲ್ಲಿ ದಂಪತಿಯೊಂದು ನಗರದ ಸರ್ಕ್ಯೂಟ್ ಹೌಸ್ ಬಳಿ ಕರ್ತವ್ಯ ನಿರತ ಸಂಚಾರ ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ರವಿವಾರ ಸರ್ಕ್ಯೂಟ್ ಹೌಸ್ ಬಳಿ ಚೆಕ್‌ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತಿದ್ದರು. ಕಾರಿನಲ್ಲಿ ಸಂಚರಿಸುತ್ತಿದ್ದ ದಂಪತಿಯು ಮಾಸ್ಕ್ ಧರಿಸದಿರುವುದನ್ನು ಗಮನಿಸಿದ ಪೊಲೀಸರು ಕಾರು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಅದರಂತೆ ಕಾರಿನಿಂದ ಇಳಿದು ಬಂದ ದಂಪತಿಯು 'ನಾವು ಮಾಸ್ಕ್ ಧರಿಸಿದ್ದೆವು. ಸಿಸಿ ಕ್ಯಾಮರಾ ಪರಿಶೀಲಿಸಿ' ಎಂದು ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ದಂಪತಿಯನ್ನೇ ಸಮಾಧಾನಪಡಿಸಿ ಕಳುಹಿಸಿಕೊಟ್ಟರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News