ಉಡುಪಿ ಜಿಲ್ಲೆ : 591 ಮಂದಿಗೆ ಕೊರೋನ ಪಾಸಿಟಿವ್

Update: 2022-01-16 14:42 GMT

ಉಡುಪಿ, ಜ.16: ಜಿಲ್ಲೆಯಲ್ಲಿ ಇಂದು 591 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ ಸೋಂಕಿಗೆ ಸಕ್ರಿಯಾಗಿರುವವರ ಸಂಖ್ಯೆ 3392ಕ್ಕೇರಿದೆ. ಇವರೊಂದಿಗೆ ದಿನದಲ್ಲಿ 78 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 591 ಮಂದಿಯಲ್ಲಿ 299 ಮಂದಿ ಪುರುಷರು ಹಾಗೂ 292 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 404 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ, ಕುಂದಾಪುರ ತಾಲೂಕಿನ 128 ಮಂದಿ ಹಾಗೂ ಕಾರ್ಕಳ ತಾಲೂಕಿನ 57 ಮಂದಿ ಇವರಲ್ಲಿ ಸೇರಿದ್ದಾರೆ. ಹೊರಜಿಲ್ಲೆ ಗಳಿಂದ ಬಂದ ಇಬ್ಬರಲ್ಲಿ ಸಹ ಸೋಂಕು ಪತ್ತೆಯಾಗಿದೆ.

ರವಿವಾರ ಪಾಸಿಟಿವ್ ಬಂದ 591 ಮಂದಿಯಲ್ಲಿ 31 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, ಏಳು ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 14 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 539 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಶನಿವಾರ 78 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 683ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 4161 ಮಂದಿ, ಕುಂದಾಪುರದಲ್ಲಿ 1496 ಹಾಗೂ ಕಾರ್ಕಳ ತಾಲೂಕಿನ 1004 ಮಂದಿ ಸೇರಿದಂತೆ ಒಟ್ಟು 6661 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 3927ಕ್ಕೇರಿದೆ.

134 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 134 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 86 ಮಂದಿ ಲಸಿಕೆ ಪಡೆದರೆ, 34 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 14 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

635 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 635 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 17 ಮಂದಿ 15ರಿಂದ 18 ವರ್ಷ ದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 183 ಮಂದಿ ಮೊದಲ ಡೋಸ್ ಹಾಗೂ 452 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News