ಸ್ಕಾರ್ಫ್ ವಿವಾದ ಧಾರ್ಮಿಕ ಸ್ವಾತಂತ್ರ್ಯದ ಹರಣ: ಪಿಎಫ್‌ಐ

Update: 2022-01-16 15:53 GMT

ಉಡುಪಿ, ಜ.16: ಕೆಲವೊಂದು ಕಾಲೇಜುಗಳಲ್ಲಿ ಸ್ಕಾರ್ಫ್ ಕುರಿತು ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದ್ದು, ಇದು ಮುಸ್ಲಿಮರ ಸಂವಿಧಾನದತ್ತ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸೀರ್ ಪಾಶ ಹೇಳಿದ್ದಾರೆ.

ವಾಸ್ತವದಲ್ಲಿ ಈಗ ವಸ್ತ್ರ ಸಂಹಿತೆ ಜಾರಿಯಲ್ಲಿರುವುದು ಎಸ್ಸೆಸ್ಸೆಲ್ಸಿವರೆಗೆ ಮಾತ್ರ. ಈ ನಡುವೆ ಪಿಯು, ಪದವಿ ಕಾಲೇಜುಗಳಲ್ಲಿ ಯಾವುದೇ ವಸ್ತ್ರ ಸಂಹಿತೆ ಜಾರಿಯಲ್ಲಿ ಇಲ್ಲದಿರುವಾಗ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಬಾರದೆನ್ನುವುದು ವಿತಂಡ ವಾದವಾಗಿದೆ. ಅದರೊಂದಿಗೆ ಸ್ಕಾರ್ಫ್ ಹೆಸರಿನಲ್ಲಿ ವಿದ್ಯಾರ್ಥಿನಿ ಯರನ್ನು ತರಗತಿಯಿಂದ ಹೊರ ಹಾಕುವ ಪ್ರಾಂಶುಪಾಲರ ನಡೆ ಅವಿವೇಕತನ ದ್ದಾಗಿದೆ. ಈಗಾಗಲೇ ಕಾಲೇಜು ಮಟ್ಟದಲ್ಲಿ ರೂಪಿಸಿರುವ ವಸ್ತ್ರ ಸಂಹಿತೆಯನ್ನು ಪಾಲಿಸಿಕೊಂಡು ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News