ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ ಕುರಿತು ಚುನಾವಣಾ ಆಯೋಗದಿಂದ ಇಂದು ನಿರ್ಧಾರ?

Update: 2022-01-17 05:57 GMT

ಹೊಸದಿಲ್ಲಿ: ಹಲವು ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆಯಂತೆ ಪಂಜಾಬ್‌ನ ವಿಧಾನಸಭಾ ಚುನಾವಣೆಯನ್ನು ಮುಂದೂಡಬಹುದೇ ಎಂಬುದರ ಕುರಿತು ಇಂದು ಚುನಾವಣಾ ಆಯೋಗದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಚುನಾವಣಾ ಆಯೋಗವು ಮಧ್ಯಾಹ್ನದ ವೇಳೆಗೆ ಈ ವಿಷಯದ ಬಗ್ಗೆ ತನ್ನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗುರು ರವಿದಾಸ್ ಜಯಂತಿ ಇರುವ ಕಾರಣಕ್ಕೆ ಕನಿಷ್ಠ ಆರು ದಿನಗಳ ಕಾಲ ಮುಂದೂಡಬೇಕೆಂದು ಒತ್ತಾಯಿಸಿದ್ದರು.

ಪಂಜಾಬ್‌ನ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳು, ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡಲಿದ್ದಾರೆ. ಆಗ ಅವರಿಗೆ ಮತದಾನ ಮಾಡಲು ಸಾಧ್ಯವಾಗದೇ ಇರಬಹುದು ಎಂದು ಪತ್ರದಲ್ಲಿ ಚನ್ನಿ ಹೇಳಿದ್ದಾರೆ.

 ಗುರು ರವಿದಾಸ್ ಅವರ ಜನ್ಮದಿನ ಫೆಬ್ರವರಿ 16 ರಂದು ಆಚರಿಸಲಾಗುತ್ತದೆ.

ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಚುನಾವಣೆಯನ್ನು ಮುಂದೂಡುವಂತೆ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಸೇರಿದಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News