×
Ad

ದ್ವೇಷಭಾಷಣ ಆರೋಪಕ್ಕೆ ಸಂಬಂಧಿಸಿ ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು: ವರದಿ

Update: 2022-01-17 14:00 IST
 Photo: Facebook

ಹೊಸದಿಲ್ಲಿ: ಕಳೆದ ತಿಂಗಳು ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನಂದ ಅವರನ್ನು ಬಂಧಿಸಿದ ಎರಡು ದಿನಗಳ ನಂತರ  ಅವರ ವಿರುದ್ಧ ಇದೀಗ ದ್ವೇಷಪೂರಿತ ಭಾಷಣ ಪ್ರಕರಣ ದಾಖಲಾಗಿದೆ  ಎಂದು NDTV ವರದಿ ಮಾಡಿದೆ.

ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಅವರನ್ನು ಆರಂಭದಲ್ಲಿ ಬಂಧಿಸಲಾಯಿತು ಹಾಗೂ  14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಆದರೆ ರಿಮಾಂಡ್ ಅರ್ಜಿಯಲ್ಲಿ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣವನ್ನೂ ಉಲ್ಲೇಖಿಸಲಾಗಿದೆ.

ಯತಿ ನರಸಿಂಹಾನಂದ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News