ನಾರಾಯಣಗುರುವಿಗೆ ಕೇಂದ್ರ ಸರ್ಕಾರದಿಂದ ಅವಮಾನ: ಅಭಯಚಂದ್ರ ಜೈನ್

Update: 2022-01-17 11:50 GMT

ಮೂಡುಬಿದಿರೆ : ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ ಸರ್ಕಾರವು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಮುಂದಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರವು ನಿರ್ಬಂಧ ಹೇರುವ ಮೂಲಕ ನಾರಾಯಣಗುರುಗಳಿಗೆ ಅವಮಾನ ಮಾಡಿದೆ. ಹಿಂದುಳಿದ ವರ್ಗಗಳ ಮೇಲೆ ಕೇಂದ್ರ ಸರ್ಕಾರವು ಯಾವ ರೀತಿ ಪ್ರೀತಿ ತೋರಿಸುತ್ತಿದೆ ಎನ್ನುವುದು ಈ ಮೂಲಕ ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರವು ಸುಭಾಶ್ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನು ಪ್ರದರ್ಶಿಸಿರುವುದಕ್ಕೂ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದು ಮೂರ್ಖತನದ ಪರಮಾವಧಿ. ಬಿಜೆಪಿ ಸರ್ಕಾರದಲ್ಲಿ ಒಳ್ಳೆಯ ನಟರರಿದ್ದಾರೆ. ಕೇಂದ್ರ, ಸರ್ಕಾರವು ಕಪಟ ನಾಟಕದ ಕಂಪೆನಿಯಾಗಿದೆ. ನೀರಿಗಾಗಿ ಹೋರಾಟ ಮಾಡುವವರ ವಿರುದ್ಧ ಕೊರೋನ ನೆಪವೊಡ್ಡಿ ಕಾನೂನು ದುರುಪಯೋಗಪಡಿಸಿಕೊಂಡಿರುವ ರಾಜ್ಯ ಸರ್ಕಾರವು ಬಿಜೆಪಿ ನಾಯಕರ ಸಭೆ, ಸಮಾರಂಭಗಳಿಗೆ ಅವಕಾಶ ನೀಡಿ ಸಾವಿರಾರು ಜನರನ್ನು ಸೇರಿಸಿ ಇಬ್ಬಗೆಯ ನೀತಿಯನ್ನು ಅನುಸರಿಸಿದೆ. ಕೊರೋನ ಸಂದರ್ಭ ಲಂಚದ ಹಣದಲ್ಲಿ ಬಿಜೆಪಿ ಯಾವುದೇ ಕಾರ್ಯಕ್ರಮಗಳನ್ನೂ ಮಾಡಬಹುದು, ಆದರೆ ರಾಜ್ಯದ ಜನರ ಹಿತಕ್ಕಾಗಿ ಯಾವುದೇ ಹೋರಾಟ ಮಾಡಬಾರದು ಎಂಬ ನಿಲುವಿನ ಬಿಜೆಪಿ ಸರ್ಕಾರವು ಜನರಿಗೆ ಅನ್ಯಾಯ ಮಾಡುತ್ತಿದೆ. ಕೊರೋನ ಸಂದರ್ಭ ಆರ್‌ಎಸ್‌ಎಸ್, ಬಿಜೆಪಿ ಅತೀ ಹೆಚ್ಚು ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದರು.

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಕಾಂಗ್ರೆಸ್ ಮುಖಂಡರಾದ ಸುರೇಶ್ ಕೋಟ್ಯಾನ್, ರಾಘು ಪೂಜಾರಿ, ಚಂದ್ರಹಾಸ ಸನಿಲ್, ವಾಸು ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News