ಉಡುಪಿ: 442 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2022-01-17 14:19 GMT

ಉಡುಪಿ, ಜ.17: ಜಿಲ್ಲೆಯಲ್ಲಿ ಸೋಮವಾರ 442 ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 3392ಕ್ಕೇರಿದೆ. ಇವರೊಂದಿಗೆ ದಿನದಲ್ಲಿ 239 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 442 ಮಂದಿಯಲ್ಲಿ 217 ಮಂದಿ ಪುರುಷರು ಹಾಗೂ 225 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 258 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ, ಕುಂದಾಪುರ ತಾಲೂಕಿನ 122 ಮಂದಿ ಹಾಗೂ ಕಾರ್ಕಳ ತಾಲೂಕಿನ 62 ಮಂದಿ ಇವರಲ್ಲಿ ಸೇರಿದ್ದಾರೆ.

ಸೋಮವಾರ ಪಾಸಿಟಿವ್ ಬಂದ 442 ಮಂದಿಯಲ್ಲಿ 15 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, ಇಬ್ಬರನ್ನು ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 11 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 414 ಮಂದಿಗೆ ಅವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ರವಿವಾರ 239 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 922ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 1724 ಮಂದಿ, ಕುಂದಾಪುರದಲ್ಲಿ 1102 ಹಾಗೂ ಕಾರ್ಕಳ ತಾಲೂಕಿನ 769 ಮಂದಿ ಸೇರಿದಂತೆ ಒಟ್ಟು 3595 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 4369ಕ್ಕೇರಿದೆ.

1122 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 1122 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 839 ಮಂದಿ ಲಸಿಕೆ ಪಡೆದರೆ, 225 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 58 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಸೇರಿದ್ದಾರೆ.

3852 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 3852 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 1605 ಮಂದಿ 15ರಿಂದ 18 ವರ್ಷ ದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 2466 ಮಂದಿ ಮೊದಲ ಡೋಸ್ ಹಾಗೂ 1386 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿ ದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News