×
Ad

ಐಎಫ್‍ಎಸ್ , ಕೆಎಎಸ್ ಅಧಿಕಾರಿ ವರ್ಗಾವಣೆ

Update: 2022-01-17 20:51 IST

ಬೆಂಗಳೂರು, ಜ.17: ರಾಜ್ಯ ಸರಕಾರವು ಓರ್ವ ಐಎಫ್‍ಎಸ್ ಹಾಗೂ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಸಿ.ಹೊಸೂರ್(ಐಎಫ್‍ಎಸ್) ಅವರನ್ನು ಬಿಎಂಆರ್‍ಡಿಎ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕೆ.ಎಚ್.ಜಗದೀಶ್(ಕೆಎಎಸ್) ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಿಬಿಎಂಪಿಯ ದಾಸರಹಳ್ಳಿ ವಲಯದ ಜಂಟಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News