ಕೇರಳದಿಂದ ಅನಾವಶ್ಯಕ ವಿವಾದ ಸೃಷ್ಟಿ : ಸಚಿವ ಸುನೀಲ್ ಕುಮಾರ್

Update: 2022-01-17 15:43 GMT
ಸುನಿಲ್ ಕುಮಾರ್

ಉಡುಪಿ, ಜ.17: ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಕೇರಳ ರಾಜ್ಯವು ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ದೇಶದ ಕೇಂದ್ರಾಡಳಿತ ಸೇರಿದಂತೆ 36 ರಾಜ್ಯಗಳು ಗಣರಾಜ್ಯೋತ್ಸವ ನಿಮಿತ್ತ ಸ್ತಬ್ಧಚಿತ್ರಗಳನ್ನು ಪೆರೇಡ್ಗೆ ಕಳುಹಿಸುವುದು ಪದ್ಧತಿ. ಆದರೆ ಪ್ರತಿ ವರ್ಷ 12 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಅದರಂತೆ 2018 ಮತ್ತು 2021ರಲ್ಲಿ ಕೇರಳ ರಾಜ್ಯವು ತನ್ನ ಚಿತ್ರಗಳೊಂದಿಗೆ ಗಣರಾಜ್ಯೋತ್ಸವ ದಲ್ಲಿ ಭಾಗವಹಿಸಿತ್ತು. 2021ರಲ್ಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿರುವ ಕೇರಳ ರಾಜ್ಯಕ್ಕೆ ಈ ವರ್ಷ ನಿಯಾಮವಳಿಯಂತೆ ಅವಕಾಶವಿರುವುದಿಲ್ಲ. ಆದರೆ ಕೇರಳ ನಾರಾಯಣ ಗುರುಗಳ ವಿಚಾರವನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದವನ್ನು ಹುಟ್ಟು ಹಾಕುತ್ತಿದೆಂದು ಅವರು ಆರೋಪಿಸಿದ್ದಾರೆ.

ಈ ಎಲ್ಲಾ ನಿಯಮಾವಳಿಗಳು ಗೊತ್ತಿರುವ ಕೇರಳ ರಾಜ್ಯವು ನಾರಾಯಣ ಗುರುಗಳ ವಿಚಾರವನ್ನು ಎಳೆದು ತಂದು ವಿವಾದವನ್ನು ಹುಟ್ಟು ಹಾಕುತ್ತಿರುವುದು ಶೋಭೆ ತರುವಂತದ್ದಲ್ಲ. ಹಿಂದೂ ವಿರೋಧಿ ನೀತಿಗಳಿಂದ ಕುಖ್ಯಾತಿ ಹೊಂದಿರುವ ಕಮ್ಯುನಿಸ್ಟರಿಂದ ನಾರಾಯಣ ಗುರುಗಳ ತತ್ವಾದರ್ಶವನ್ನು ನಾವು ಕಲಿಯಬೇಕಾಗಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News