ಬೆಳಗಾವಿ ಜಿಲ್ಲೆಯಲ್ಲಿ ಮೂರು ಮಕ್ಕಳ ಸಾವು ಪ್ರಕರಣ: ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ

Update: 2022-01-17 16:22 GMT

ಬೆಂಗಳೂರು, ಜ. 17: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. 

ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಯಲ್ಲಿ ಮಾತನಾಡಿದ್ದು, ದಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆಂಬ ಪ್ರಕರಣದ ಕುರಿತು ಸಿಎಂ, ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆಂದು ಮುಖ್ಯಮಂತ್ರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News