ಪುಸ್ತಕ ಪ್ರಾಧಿಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2022-01-17 16:47 GMT

ಮಂಗಳೂರು, ಜ.17: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2021ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18ರಿಂದ 40 ವರ್ಷ ವಯೋಮಿತಿಯವರಾಗಿರಬೇಕು.ಸ್ವ-ವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸೆಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

ಇದರೊಂದಿಗೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳನ್ನು ಹೊಂದಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರೆ ಯಾವುದೇ ಪದವಿ, ಸ್ನಾತಕೋತ್ತರ ಪದವಿ (ಪಿಎಚ್‌ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿ ಅಥವಾ ಪರೋಕ್ಷವಾಗಿ ಮನನೊಯಿುಸುವಂತಹ ವಿಷಯವಿರಬಾರದು.ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.ಅರ್ಜಿಗಳನ್ನು ಫೆ.15 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002ಕ್ಕೆ ಸಲ್ಲಿಸಬೇಕು.

ಮಾಹಿತಿಗೆwww.kannadapustakapradhikara.com ಅಥವಾ ದೂ.ಸಂ: 080-22484516, 22107704ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News