ಪಂಜಾಬಿನಲ್ಲಿ ಫೆ.14ರ ಬದಲು ಫೆ.20ಕ್ಕೆ ಮತದಾನ

Update: 2022-01-17 17:04 GMT

ಚಂಡಿಗಡ,ಜ.17: ಗುರು ರವಿದಾಸ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಫೆ.14ರಂದು ನಡೆಯಬೇಕಿದ್ದ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಫೆ.20ಕ್ಕೆ ಮುಂದೂಡಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಆಯೋಗಕ್ಕೆ ಕೋರಿಕೆಗಳನ್ನು ಸಲ್ಲಿಸಿದ್ದವು.

ದಲಿತ ಸಮುದಾಯದ ಹೆಚ್ಚಿನ ಜನರು ಗುರು ರವಿದಾಸ ಜಯಂತಿ ಆಚರಣೆಗಾಗಿ ಫೆ.10ರಿಂದ ಫೆ.16ರವರೆಗೆ ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ ಮತ್ತು ಅವರಿಗೆ ಮತದಾನ ಮಾಡಲು ಸಾಧ್ಯವಾಗದಿರಬಹುದು ಎಂದು ಪಂಜಾಬಿನ ಜನಸಂಖ್ಯೆಯ ಶೇ.32ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಪ್ರತಿನಿಧಿಗಳು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮತದಾನವನ್ನು ಕನಿಷ್ಠ ಆರು ದಿನಗಳ ಕಾಲ ಮುಂದೂಡುವಂತೆ ಕೋರಿ ಚನ್ನಿ ಆಯೋಗಕ್ಕೆ ಪತ್ರವನ್ನು ಬರೆದಿದ್ದರು. ಗುರು ರವಿದಾಸ ಜಯಂತಿಯು ಫೆ.16ರಂದು ನಡೆಯಲಿದೆ.

 ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ ಲೋಕ ಕಾಂಗ್ರೆಸ್ ಸೇರಿದಂತೆ ಅದರ ಮಿತ್ರಪಕ್ಷಗಳು ಹಾಗೂ ಪಂಜಾಬಿನ ಆಪ್ ಘಟಕಗಳೂ ಚುನಾವಣೆಯನ್ನು ಮುಂದೂಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರಗಳನ್ನು ಬರೆದಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News