ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ; ಕೇಂದ್ರ ಸರಕಾರದ ವಿರುದ್ಧ ಖಂಡನೆ

Update: 2022-01-17 17:15 GMT

ಮಂಗಳೂರು, ಜ.17: ಗಣರಾಜ್ಯೋತ್ಸವ ಪರೇಡ್ ಸಂದರ್ಭ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶಿಸುವಂತೆ ಕೇರಳ ಸರಕಾರ ಕಳುಹಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ ಧೋರಣೆಗೆ ಸಂಘಟನೆಗಳಿಂದ ಖಂಡನೆ ವ್ಯಕ್ತವಾಗಿದೆ.

*ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ಯಾವುದೇ ತತ್ವಸಿದ್ಧಾಂತಗಳ ನೆಲೆಗಟ್ಟಿನಲ್ಲಿಲ್ಲದೆ ಕೇವಲ ಜಾತಿ ಧರ್ಮಗಳ ಮಧ್ಯೆ ಸಂಘರ್ಷ ಏರ್ಪಡಿಸುತ್ತಾ ಬಂದಿದೆ. ಅದಕ್ಕೆ ಪೂರಕ ಎಂಬಂತೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಾಣ ಗುರುವಿನ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಅವಕಾಶ ನಿರಾಕರಿಸಲಾಗಿದೆ. ಕೇಂದ್ರ ಸರಕಾರ ಕೂಡಲೇ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಮಾನತೆಯ ಸಂದೇಶ ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ ನಾರಾಯಣ ಗುರುವಿನ ಸ್ತಬ್ದಚಿತ್ರ ಪ್ರದರ್ಶನಕ್ಕೆ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದು ಖಂಡನೀಯ ಎಂದು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯ ಸ್ಥಾಪಕಾಧ್ಯಕ್ಷ ಅವಿನಾಶ್ ಸುವರ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News