ಕೋಟೆಬಾಗಿಲಿನ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್

Update: 2022-01-17 17:37 GMT

ಭಟ್ಕಳ:  ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಬಾಗಿಲ್ ಸೆಂಟ್ ಥಾಮಸ್ ಶಾಲೆಯ 17 ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಶಾಲಾ ಪರಿಸರವನ್ನು ಸೀಲ್ಡೌನ್ ಮಾಡಲಾಗಿದೆ.

ಈ ಕುರಿತಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೋಗರ್ ಖಚಿತಪಡಿಸಿದ್ದು,  ರವಿವಾರ ಒಂದೇ ದಿನ ಶಾಲೆಯ 17 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಶಾಲೆಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಒಂದು ಶಾಲೆಯಲ್ಲಿ 5ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೋನ ಪಾಸಿಟಿವ್ ಆದಲ್ಲಿ ಆ ಶಾಲೆಗೆ ರಜೆ ಘೋಷಿಸಲಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳೇ ನಿರ್ಣಯ ಕೈಗೊಳ್ಳುತ್ತಾರೆ. ನಾವು ಜಿಲ್ಲಾಡಳಿತಕ್ಕೆ ವರದಿಯನ್ನು ನೀಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಕೋಟೆಬಾಗಿಲ ಮಜಿರೆಯಲ್ಲಿ ಓರ್ವ ನರ್ಸ್ ಸೇರಿದಂತೆ 4-5 ಜನರಿಗೆ ಕೊರೊನಾ ತಗುಲಿದ್ದು, ಸೆಂಟ್ ಥಾಮಸ್ ಶಾಲೆ ಪರಿಸರದ 100ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಬರ್ಂಧ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News