ಬೆಂಗಳೂರಿನ 738 ಪೊಲೀಸರಿಗೆ ಕೋವಿಡ್ ದೃಢ

Update: 2022-01-17 17:37 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.17: ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೆ ಕೋವಿಡ್ ಸೋಂಕಿನ ಪ್ರಕರಣಗಳು ದ್ವಿಗುಣಗೊಳ್ಳುತ್ತಿದ್ದು, ಇದರ ನಡುವೆ ನಗರದ 738 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರಿಗೆ ಕೋವಿಡ್ ಸೋಂಕು ತಗುಲುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ತಮ್ಮ ಸಿಬ್ಬಂದಿ ಸೂಚನೆ ನೀಡಿದ್ದಾರೆ. 

ಪೊಲೀಸ್ ಠಾಣೆ ಬಿಟ್ಟು ಹೊರಗೆ ಕೆಲಸ ಮಾಡುವ ಸಿಬ್ಬಂದಿಗೆ ಕೊರೋನ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದು, ಗರ್ಭಿಣಿ ಸಿಬ್ಬಂದಿಯಲ್ಲಿ ಆರೋಗ್ಯದ ಸಮಸ್ಯೆ ಕಾಣಿಸಿದರೆ ಕರ್ತವ್ಯಕ್ಕೆ ಬರದೇ ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಿದ್ದಾರೆ.

ಆಯಾ ವಿಭಾಗದ ಡಿಸಿಪಿಗಳು ಮತ್ತು ಇನ್‍ಸ್ಪೆಕ್ಟರ್‍ಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ಸಿಬ್ಬಂದಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸೂಚನೆ ನೀಡಿದ್ದಾರೆ ಹೊಯ್ಸಳ ರೌಂಡ್ಸ್ ಮತ್ತು ಚೀತಾ ಗಸ್ತುನಲ್ಲಿ ಎಲ್ಲ ಹಿರಿಯ ಸಿಬ್ಬಂದಿ ಹೊರತುಪಡಿಸಿ ಯುವ ಸಿಬ್ಬಂದಿ ತೆರಳಲು ಸೂಚನೆ ನೀಡಲಾಗಿದ್ದಾರೆ.

ಅದೇ ರೀತಿ, ಠಾಣೆ ಹಾಗೂ ವಾಹನಗಳಿಗೆ ಪ್ರತಿ ನಿತ್ಯ ಎರಡು ಬಾರಿ ಸ್ಯಾನಿಟೈಸ್ ಮಾಡುವಂತೆ ಹಾಗೂ ಸಿಬ್ಬಂದಿಗೆ ಫೇಸ್‍ಶೀಲ್ಡ್, ಮಾಸ್ಕ್ ಧರಿಸುವಂತೆ ಕಡ್ಡಾಯ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News