ಬೆಂಗಳೂರಿನಲ್ಲಿ ಜ.31ರವರೆಗೆ ನಿಷೇಧಾಜ್ಞೆ ಮುಂದುವರಿಕೆ: ಕಮಲ್ ಪಂತ್ ಆದೇಶ

Update: 2022-01-17 18:15 GMT

ಬೆಂಗಳೂರು, ಜ.17: ಕೋವಿಡ್ ಮೂರನೆ ಅಲೆ ಹರಡುವಿಕೆ ನಿಯಂತ್ರಿಸಲು ನಗರದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅಡಿ ನಿಷೇಧಾಜ್ಞೆಯನ್ನು ಜ.31ರವರೆಗೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಗೆ ಆಯುಕ್ತರು ಜ.6ರಿಂದ ಜ.19ರವರೆಗೂ 144 ಸೆಕ್ಷನ್ ಜಾರಿಗೊಳಿಸಿದ್ದರು. ಇದೀಗ ಜ.31ರವರೆಗೂ ವಿಸ್ತರಿಸಲಾಗಿದೆ. 

ಈ ಅವಧಿಯಲ್ಲಿ ಪ್ರತಿಭಟನೆ, ರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News