ಅಕ್ರಮ ಮರಳುಗಾರಿಕೆ ಪ್ರಕರಣ: ಪಂಜಾಬ್ ಸಿಎಂ ಚನ್ನಿ ಸೋದರಳಿಯನ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Update: 2022-01-18 05:22 GMT

ಹೊಸದಿಲ್ಲಿ: 2022ರ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿರುವಾಗ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಸೋದರಳಿಯ ಹಾಗೂ ಮತ್ತು ಇತರ ಹಲವರ ಮೇಲೆ ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ಇಂದು ದಾಳಿ ನಡೆಸಿದೆ ಎಂದು NDTV ವರದಿ ಮಾಡಿದೆ.  

ಇಂದು ಮುಂಜಾನೆ ಭೂಪಿಂದರ್ ಸಿಂಗ್ ಹನಿ ಅವರ ಮನೆ ಮತ್ತು ಪಂಜಾಬ್‌ನ ಇತರ 10 ಸ್ಥಳಗಳಲ್ಲಿ ಶೋಧ ನಡೆಸಲಾಯಿತು.

ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಫೆಬ್ರವರಿ 20 ರಂದು ಮತದಾನ ನಡೆಯಲಿರುವ ಪಂಜಾಬ್‌ನಲ್ಲಿ ಪ್ರಚಾರದ ಮಧ್ಯದಲ್ಲಿ ಈ ದಾಳಿಗಳು ನಡೆದಿವೆ. ಚುನಾವಣೆ ಫಲಿತಾಂಶವನ್ನು ಮಾರ್ಚ್ 10 ರಂದು ಘೋಷಿಸಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News