ಸಾಹಿತಿ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ಕಂಬಾರ ನಿಧನ

Update: 2022-01-18 05:47 GMT

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ (76) ಅವರು ಮಂಗಳವಾರ ಬೆಳಗ್ಗೆ ನಿಧನರಾದರು.

ಅವರು ಹೃದಯ ಸಂಬಂಧಿ ಅನಾರೋಗ್ಯಕ್ಕೀಡಾಗಿದ್ದರು. ಜ.3ರಂದು ಬೆಂಗಳೂರಿನ ಹೃದ್ರೋಗ ಆಸ್ಪತ್ರೆಗೆ  ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 6.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕತ್ರಿಗುಪ್ಪೆಯಲ್ಲಿರುವ ಅವರ ನಿವಾಸ ಸಿರಿ ಸಂಪಿಗೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News