×
Ad

ಪಂಜಾಬ್: ಭಗವಂತ್ ಮಾನ್ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ

Update: 2022-01-18 12:29 IST

ಮೊಹಾಲಿ: ಸಂಸದ ಭಗವಂತ್ ಮಾನ್ ಅವರು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪಕ್ಷದ ವರಿಷ್ಟ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ  ಘೋಷಿಸಿದರು. ಎಎಪಿ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆರಿಸಲು ಫೋನ್ ಮತ್ತು ವಾಟ್ಸಾಪ್  ಮಾಡುವಂತೆ  ಪಂಜಾಬ್ ಜನತೆಗೆ ಕೇಳಿಕೊಂಡಿತ್ತು.

ಭಗವಂತ್ ಮಾನ್ ಫೋನ್ ಮತ್ತು ವಾಟ್ಸಾಪ್ ಮೂಲಕ ಪಡೆದ ಶೇಕಡಾ 93 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದರು.

3ರಷ್ಟು ಮತಗಳು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಹೆಸರಿನಲ್ಲಿವೆ. ಕೇಜ್ರಿವಾಲ್ ಪರವಾಗಿದ್ದ ಕೆಲವು ಮತಗಳನ್ನು ಅಸಿಂಧು ಎಂದು ಘೋಷಿಸಲಾಯಿತು.

ಪಂಜಾಬ್ ಚುನಾವಣೆಯಲ್ಲಿ ಆಪ್ ಗೆಲ್ಲುವುದು ಸ್ಪಷ್ಟ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾದ ವ್ಯಕ್ತಿಯೇ ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಭಗವಂತ್ ಮಾನ್ ಪಂಜಾಬ್‌ನ ಸಂಗ್ರೂರ್ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಚುನಾಯಿತರಾಗಿದ್ದಾರೆ.

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಮೊದಲ ಹಾಗೂ  ಏಕೈಕ ಪಕ್ಷ ಎಎಪಿ. ಹಿಂದಿನ ಚುನಾವಣೆಯಲ್ಲಿ ಹಾಗೆ ಮಾಡುವುದನ್ನು ತಪ್ಪಿಸಿದ್ದ ಅದು ಈ ಬಾರಿ ಜನತೆಗೆ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಂತೆ ಕೇಳಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News