ಬ್ರಹ್ಮಶ್ರೀ ನಾರಾಯಣಗುರು ಸ್ತಬ್ಧಚಿತ್ರ ನಿರಾಕರಣೆ ವಿವಾದ; ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಕಾಲ್ನಡಿಗೆ ಜಾಥಾ

Update: 2022-01-18 13:24 GMT

ಮಂಗಳೂರು, ಜ.18: ಗಣರಾಜ್ಯೋತ್ಸವ ಪರೇಡ್‌ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ನಮ್ಮ ನಡಿಗೆ ಬ್ರಹ್ಮಶ್ರೀ ನಾರಾಯಣ ಗುರು ಕಡೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದವರೆಗೆ ನಡೆಯಲಿರುವ ಕಾಲ್ನಡಿಗೆ ಜಾಥಾಕ್ಕೆ ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಾಜಿ ಉಪ ಮುಖ್ಯಮಂತ್ರಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.

ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಮುಖಂಡರಾದ ಐವನ್ ಡಿಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷ ಶಾಲೆಟ್ ಪಿಂಟೋ, ಯುವ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಂಜುನಾಥ್ ಭಂಡಾರಿ, ಜೆಆರ್ ಲೋಬೊ, ಶಹುಲ್ ಹಮೀದ್, ಪಿ ವಿ ಮೋಹನ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಿತ್ತಿಚಿತ್ರದೊಂದಿಗೆ ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆ ಜಾಥಾ ಕಾಂಗ್ರೆಸ್ ಕಚೇರಿಯಿಂದ ಹೊರಟಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News